ಬೆಂಗಳೂರು: ಗ್ಯಾಂಬ್ಲಿಂಗ್ ದಂಧೆ ನಡೆಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ನಟಿ ನೇಹಾ ಶೆಟ್ಟಿ ತಂದೆ ಹರಿರಾಜ್ ಶೆಟ್ಟಿ ಮೇಲೆ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಮುಂಗಾರು ಮಳೆ- 2 ಚಿತ್ರದ ನಟಿ ನೇಹಾ ಶೆಟ್ಟಿಯ ತಂದೆ ಹರಿರಾಜ್ ಶೆಟ್ಟಿ ಕನ್ನಿಂಗ್ ಹ್ಯಾಮ್ ರಸ್ತೆಯ ನಂ15ನೇ ಬೇಸ್ಮೆಂಟ್ ನ ಪೂಲ್‍ಎನ್ ರಿ ಕ್ರಿಯೇಷನ್ ಕ್ಲಬ್ ನಲ್ಲಿ ಜೂಜು ದಂಧೆ ನಡೆಸುತ್ತಿದ್ದರು ಎಂಬ ಆರೋಪದಡಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಈ ಬಗ್ಗೆ ಸಿಸಿಬಿ ಇನ್ಸ್‍ಪೆಕ್ಟರ್ ಎ.ಪಿ ಕುಮಾರ್ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದು, ನಗರದಲ್ಲಿ ಜೂಜು ಅಡ್ಡೆ ನಿರ್ಮಿಸಿ ಕಾನೂನು ಬಾಹಿರ ಕೃತ್ಯ ಕೇಸ್ ದಾಖಲಾಗಿದೆ. ಪೂಲ್‍ಎನ್, ರಿ ಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಗ್ಯಾಂಬ್ಲಿಂಗ್, ಬ್ಯಾನ್ ಸ್ಕಿಲ್ ಗೇಮ್, ವಿಡಿಯೋ ಗೇಮ್ ಪಾರ್ಲರ್ ನಡೆಸ್ತಿದ್ದ ಆರೋಪದಡಿ ಹರಿರಾಜ್ ವಿರುದ್ಧ ಬರೋಬ್ಬರಿ 250 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಹರಿರಾಜ್ ಶೆಟ್ಟಿ ಜೂಜಾಟಕ್ಕೆಂದು ಮಹಿಳೆಯರನ್ನು ಕರೆತಂದಿದ್ದರು ಎನ್ನಲಾಗಿದೆ. ಈ ಆರೋಪಪದ ಮೇರೆಗೆ ಐವರು ಮಹಿಳೆಯರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇದರಲ್ಲಿ ಸರ್ಕಾರಿ ಅಧಿಕಾರಿಗಳ ಪತ್ನಿಯರು, ಉದ್ಯಮಿಗಳ ಪತ್ನಿಯರು ಹಾಗೂ ಓರ್ವ ರೌಡಿ ಶೀಟರ್ ತಾಯ ಕೂಡ ಇದ್ದಾರೆ.
PublicNext
02/08/2021 08:00 am