ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೋ. ರಾಮಚಂದ್ರ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಗೈದ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಸಂಶೋಧನಾ ವಿದ್ಯಾರ್ಥಿನಿ ಜಯಲಕ್ಷ್ಮಿ ಪುರಂ ಠಾಣೆಗೆ ದೂರು ಸಲ್ಲಿಸಿದ್ದಾಳೆ. ಸಂತ್ರಸ್ತೆ ರಾಮಚಂದ್ರ ಬಳಿ ಪಿಎಚ್ ಡಿ ಮಾರ್ಗದರ್ಶನ ಪಡೆಯುತ್ತಿದ್ದರು. ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡಿದ್ದ ಪ್ರೊ. ರಾಮಚಂದ್ರ ವಿದ್ಯಾರ್ಥಿನಿ ಮೇಲೆ ಎರಗಿದ್ದಾನೆ.
ಈ ವೇಳೆ ವಿದ್ಯಾರ್ಥಿನಿ ಕೂಗಾಟ, ಚೀರಾಟ ನಡೆಸಿದ್ದಾಳೆ ಇದೇ ಸಂಧರ್ಭಕ್ಕೆ ಮನೆಗೆ ಪ್ರಾಧ್ಯಾಪಕ ಪತ್ನಿ ಲೋಲಾಕ್ಷಿ ಆಗಮಿಸಿ ಯುವತಿ ಹಾಗೂ ತನ್ನ ಪತಿಯನ್ನು ಠಾಣೆಗೆ ಕರೆತಂದು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಲೋಲಾಕ್ಷಿ ಅವರು ಸಹ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿದ್ದಾರೆ.
PublicNext
05/08/2021 10:19 pm