ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಾರಿ ಅಡ್ಡಗಟ್ಟಿ 6 ಕೋಟಿ ಮೌಲ್ಯದ ಫೋನ್ ಗಳ ಕಳ್ಳತನ

ಕೋಲಾರ: ತಮಿಳುನಾಡಿನಿಂದ ಕೋಲಾರ ಮಾರ್ಗವಾಗಿ ಬೆಂಗಳೂರಿಗೆ ಮೊಬೈಲ್ ಸಾಗಿಸುತ್ತಿದ್ದ ಕಂಟೈನರ್ ಅಡ್ಡಗಟ್ಟಿದ ದರೋಡೆಕೋರರು ಬರೋಬ್ಬರಿ 6.39 ಕೋಟಿ ರು. ಮೌಲ್ಯದ ಮೊಬೈಲ್ ಗಳನ್ನು ದೋಚಿ ಪರಾರಿಯಾಗಿದ್ದಾರೆ. ಖಾಲಿ ಕಂಟೈನರ್ ಅನ್ನು ಕೋಲಾರ ತಾಲ್ಲೂಕಿನ ನೆರ್ನಹಳ್ಳಿ ಬಳಿ ನಿಲ್ಲಿಸಿ ಮೊಬೈಲ್ ಸರಕಿನೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿದ್ದ ಸುರೇಶ್ರನ್ನು ನೋಡಿದ ದಾರಿಹೋಕರು ಬಳಿ ಹೋಗಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುರೇಶ್ ಮುಳಬಾಗಿಲು ಗ್ರಾಮಾಂತರ ಠಾಣೆಗೆ ತೆರಳಿ ದರೋಡೆ ಪ್ರಕರಣ ದಾಖಲಿಸಿದ್ದಾರೆ. ಚೆನ್ನೈನಲ್ಲಿರುವ ಎಂ.ಐ ಕಂಪನಿಯ ಮೊಬೈಲ್ ಉತ್ಪಾದನಾ ಘಟಕದಿಂದ ಹೊಸಕೋಟೆ ಬಳಿಯ ಕಂಪನಿ ಗೋದಾಮಿಗೆ ಮೊಬೈಲ್ ಸಾಗಿಸಲಾಗುತ್ತಿತ್ತು.

ಆರೋಪಿಗಳ ಪತ್ತೆಗೆ ಮುಳಬಾಗಿಲು ಡಿವೈಎಸ್ಪಿ ನೇತೃತ್ವದಲ್ಲಿ 2 ವಿಶೇಷ ತಂಡ ರಚಿಸಲಾಗಿದೆ. ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಸಿಕ್ಕಿದ್ದು, ಸದ್ಯದಲ್ಲೇ ಬಂಧಿಸುತ್ತೇವೆ ಎಂದು ಎಸ್ ಪಿ ಸುರೇಶ್ ಬಾಬು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

07/08/2021 11:27 am

Cinque Terre

35.36 K

Cinque Terre

1