ಕಾರವಾರ: ಬಂಧನಕ್ಕೊಳಗಾದ ಶಂಕಿತ ಭಯೋತ್ಪಾದಕನನ್ನ ಪೊಲೀಸರು ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ತಾಲೂಕಿನ ಮಂಕಿ ಗ್ರಾಮದಲ್ಲಿ ಶಂಕಿತ ಭಯೋತ್ಪಾದಕ ಜುಫ್ರಿ ಜವಾಹರ್ ದಾಮೂದಿ ಎನ್ನುವವನನ್ನ ನಿನ್ನೆ ಎನ್.ಐ.ಎ ಹಾಗೂ ರಾಜ್ಯ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು.
ಈತ ಐಸೀಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ. ಐಸೀಸ್ ಮಾಸಿಕ ಪತ್ರಿಕೆ ವಾಯ್ಸ್ ಆಫ್ ಹಿಂದ್ ದಕ್ಷಿಣ ಭಾರತದಲ್ಲಿ ಭಾಷಾಂತರ ಮಾಡುತ್ತಿದ್ದ ಜುಫ್ರಿ ಸಾಮಾಜಿಕ ಜಾಲತಾಣ ಮೂಲಕ ಯುವಕರಿಗೆ ಪ್ರಚೋದನೆ ಕೊಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ನಿನ್ನೆ ಶಂಕಿತ ಭಯೋತ್ಪಾದಕನನ್ನ ಎನ್.ಐ.ಎ ಅಧಿಕಾರಿಗಳು ಹಾಗೂ ರಾಜ್ಯ ಪೊಲೀಸರು ವಶಕ್ಕೆ ಪಡೆದಿದ್ದರು.
PublicNext
07/08/2021 07:02 pm