ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಪೈಶಾಚಿಕ ಕೃತ್ಯ ಮೆರೆದಿದ್ದು, ಬಿಜೆಪಿ ಕಿಸಾನ್ ಮೋರ್ಚಾದ ಅಧ್ಯಕ್ಷ ಹಾಗೂ ಅವರ ಪತ್ನಿಯ ಮೇಲೆ ಫೈರಿಂಗ್ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಕುಲ್ಗಂನ ಬಿಜೆಪಿ ಕಿಸಾನ್ ಮೋರ್ಚಾದ ಅಧ್ಯಕ್ಷ ಗುಲಾಂ ರಸೂಲ್ ದರ್ ಹಾಗೂ ಇವರ ಪತ್ನಿ ಉಗ್ರರ ಗುಂಡಿಗೆ ಬಲಿಯಾದವರು. ಅನಂತ್ನಾಗ್ ಜಿಲ್ಲೆಯ ಲಾಲ್ಚೌಕ್ನಲ್ಲಿದ್ದ ದಂಪತಿ ಮೇಲೆ ಮನಬಂದಂತೆ ಗುಂಡಿನ ಸುರಿಮಳೆಗೈದಿದ್ದಾರೆ. ಪರಿಣಾಮ ಗುಲಾಂ ರಸೂಲ್ ದರ್ ದಂಪತಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನುಸಸ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
PublicNext
09/08/2021 05:31 pm