ಹೈದರಾಬಾದ್: ವೇಗವಾಗಿ ಬಂದ ಕಾರ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಭೀಕರ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಮಾಚರೆಡ್ಡಿಯಲ್ಲಿ ನಡೆದಿದೆ. ಈ ಅಪಘಾತದ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗಜಸಿಂಗವರಂನ ಅಲೆಪು ರಾಮು ಮತ್ತು ಆತನಿಂದ ಲಿಫ್ಟ್ ಕೇಳಿ ಬೈಕ್ ಹತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಆಗಸ್ಟ್ ೮ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಪೀಸ್ ಪೀಸ್ ಆಗಿದ್ದು, ಸವಾರ ಹಾಗೂ ಹಿಂಬದಿಯಲ್ಲಿದ್ದ ಮಹಿಳೆ ಹಾರಿ ಬಿದ್ದಿದ್ದಾರೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
10/08/2021 09:59 am