ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಕು ತೋರಿಸಿ ಮಾಂಗಲ್ಯ ಸರ ಕಿತ್ತುಕೊಂಡು ಸಿಕ್ಕಿಬಿದ್ದ ಕಳ್ಳನ ಚಳಿ ಬಿಡಿಸಿದ ಸಾರ್ವಜನಿಕರು

ದೊಡ್ಡಬಳ್ಳಾಪುರ: ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯ ಸರ ಕಿತ್ತುಕೊಂಡು ಓಡುತ್ತಿದ್ದ ಕಳ್ಳನನ್ನು ಬೆನ್ನಟ್ಟಿ ಹಿಡಿದ ಸಾರ್ವಜನಿಕರು ಆತನ ಚಳಿ ಬಿಡಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಭ್ರಮಾರಂಬಿಕೆ ಎಂಬವರು ತಮ್ಮ ಅಂಗಡಿಯಲ್ಲಿ ವ್ಯಾಪಾರನಿರತರಾಗಿದ್ದರು. ಈ ವೇಳೆ ಅಂಗಡಿಗೆ ನುಗ್ಗಿದ ಸರಗಳ್ಳ, ಚೂರಿ ತೋರಿ ಬೆದರಿಸಿ ಚಿನ್ನದ ಸರವನ್ನು ಕಿತ್ತುಕೊಂಡು ಕಾಲ್ಕಿತ್ತಿದ್ದಾನೆ. ತಕ್ಷಣ ಆಕೆ ಜೋರಾಗಿ ಕಿರುಚಿಕೊಂಡಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿಕೊಂಡು ಹೋಗಿದ್ದಾರೆ.

ಸ್ವಲ್ಪದೂರ ಆತನನ್ನು ಬೆನ್ನಟ್ಟಿಕೊಂಡು ಹೋದ ಸಾರ್ವಜನಿಕರು, ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನಿಗೆ ಥಳಿಸಿ ಕಂಬಕ್ಕೆ ಕಟ್ಟಿ ಹಾಕಿ, ಕದ್ದುಕೊಂಡಿದ್ದ ಸರವನ್ನು ಮಹಿಳೆಗೆ ಮರಳಿಸಿದ್ದಾರೆ. ನಂತರ ದೊಡ್ಡಬಳ್ಳಾಪುರ ಪೊಲೀಸರಿಗೆ ಕರೆ ಮಾಡಿ, ಆರೋಪಿಯನ್ನು ಅವರಿಗೆ ಒಪ್ಪಿಸಿದ್ದಾರೆ. ಕಳ್ಳನನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ಆರಂಭಿಸಿದ್ದಾರೆ.

Edited By : Vijay Kumar
PublicNext

PublicNext

10/08/2021 04:01 pm

Cinque Terre

36.85 K

Cinque Terre

0

ಸಂಬಂಧಿತ ಸುದ್ದಿ