ಪಣಜಿ: ಗೋವಾದ ಕಲಂಗುಟ್ ಬೀಚ್ನಲ್ಲಿ 19 ವರ್ಷದ ಯುವತಿಯ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.
ಮೃತ ಯುವತಿಯನ್ನು 19 ವರ್ಷದ ಸಿದ್ಧಿ ನಾಯ್ಕ ಎಂದು ಗುರುತಿಸಲಾಗಿದೆ. ನಿನ್ನೆ (ಬುಧವಾರ) ಬೆಳಗ್ಗೆಯಿಂದಲೂ ಆಕೆ ಕಾಣೆಯಾಗಿದ್ದಳು. ಪರವಾರಿ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮಾಪುಸಾ ಗ್ರೀನ್ ಪಾರ್ಕ್ ಜಂಕ್ಷನ್ನಿಂದ ಕಾಣೆಯಾಗಿದ್ದಳು. ಸದ್ಯ ಯುವತಿಯ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಗೋವಾದ ಬೀಚ್ವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ಅತಿ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಗೋವಾ ಸದನದಲ್ಲೂ ಇದೇ ವಿಷಯವನ್ನಿಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿದ್ದವು.
PublicNext
12/08/2021 05:08 pm