ಬೆಂಗಳೂರು: ಹಲವು ಪ್ರದೇಶಗಳಿಂದ ಸರ್ಕಾರಿ ಬಸ್ ನಲ್ಲೇ ಗಾಂಜಾ ಸಾಗಿಸಿ ಬೆಂಗಳೂರು ನಗರದಲ್ಲಿ ಮಾರಾಟ ಮಾಡಿತ್ತಿದ್ದ ಇಬ್ಬರು ಸಾರಿಗೆ ನೌಕರರನ್ನು ಪೊಲೀಸರು ಬಲೆಗೆ ಕೆಡವಿದ್ದಾರೆ.
ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಬಂಧಿತ ಗಾಂಜಾ ಪೆಡ್ಲರ್ ಗಳು. ಈ ಇಬ್ಬರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಹಾಗೂ ನಿರ್ವಾಹಕರಾಗಿದ್ದಾರೆ. ಸರ್ಕಾರಿ ಬಸ್ ಗಳಲ್ಲಿ ಮುಕ್ತ ಓಡಾಟಕ್ಕೆ ಅವಕಾಶ ಹಿನ್ನೆಲೆ ಕಲಬುರಗಿಯಿಂದ ಗಾಂಜಾ ತಂದು ಬೆಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಈ ಮೂಲಕ ತಮಗೆ ಕಲ್ಪಿಸಿದ್ದ ಸೌಲಭ್ಯವನ್ನು ದುರ್ಬಳಕೆ ಮಾಡಿ ಕೃತ್ಯ ಎಸಗಿದ್ದಾರೆ. ಬಂಧಿತ ಆರೋಪಿಗಳಿಂದ 9.8 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಈ ಇಬ್ಬರ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಕೇಸ್ ದಾಖಲಾಗಿದೆ.
PublicNext
12/08/2021 10:50 pm