ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಜೈ ಶ್ರೀ ರಾಮ್' ಘೋಷಣೆ ಕೂಗುತ್ತಾ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ಕೇಸ್- ಮೂವರ ಬಂಧನ

ಲಕ್ನೋ: 'ಜೈ ಶ್ರೀ ರಾಮ್' ಘೋಷಣೆ ಕೂಗುತ್ತಾ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಬೀದಿಯಲ್ಲಿ ಮೆರವಣಿಗೆ ಮಾಡಿ, ಆತನ ಮೇಲೆ ಹಲ್ಲೆ ನಡೆಸಿ ಅಮಾನವೀಯ ಘಟನೆ ಉತ್ತರ ಪ್ರದೇಶದ ಕಾನ್ಪುರ ಪಟ್ಟಣದಲ್ಲಿ ನಡೆದಿದ್ದು, ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ರಾಹುಲ್, ಅಮನ್ ಮತ್ತು ರಾಜೇಶ್ ಬಂಧಿತರು. ಬಂಧನದ ನಂತರ ಬಜರಂಗದಳದ ಕಾರ್ಯಕರ್ತರ ಗುಂಪು ಕಾನ್ಪುರ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿತು. ಬಳಿಕ ಪೊಲೀಸರು, ನ್ಯಾಯಯುತ ತನಿಖೆಯ ಭರವಸೆ ನೀಡಿದಾಗ ಅಲ್ಲಿಂದ ತೆರಳಿದ್ದಾರೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ಸಂತ್ರಸ್ತ ವ್ಯಕ್ತಿಯ ಪುಟ್ಟ ಮಗು ತನ್ನ ತಂದೆಯನ್ನು ಬಿಡುವಂತೆ ಕೇಳಿಕೊಂಡ ದೃಶ್ಯವನ್ನು ಕಾಣಬಹುದಾಗಿದೆ. ಮೆರವಣಿಗೆ ಬಳಿಕ ಮುಸ್ಲಿಂ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

"ಸಂತ್ರಸ್ತ ವ್ಯಕ್ತಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ" ಎಂದು ಕಾನ್ಪುರ ಪೊಲೀಸರು ತಿಳಿಸಿದ್ದಾರೆ.

Edited By : Shivu K
PublicNext

PublicNext

13/08/2021 11:37 am

Cinque Terre

88.11 K

Cinque Terre

37