ತುಮಕೂರು: ಧ್ವಜಸ್ತಂಭ ನಿಲ್ಲಿಸುತ್ತಿದ್ದ ಮೂವರು ಬಾಲಕರಿಗೆ ವಿದ್ಯುತ್ ಶಾಕ್ ಹೊಡೆದು, ಈ ಪೈಕಿ ಓರ್ವ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದಿದೆ.
ಕರೀಕೆರೆ ಗ್ರಾಮದ ಚಂದನ್ (16) ಮೃತ ದುರ್ದೈವಿ. ಈ ಘಟನೆಯಲ್ಲಿ ಶಶಾಂಕ್ (16) ಹಾಗೂ ಪವನ್ (22) ಗಂಭೀರವಾಗಿ ಗಾಯಗೊಂಡಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸಲು ಹೋಗಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಚಂದನ್ನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದನ್ ಸಾವನ್ನಪ್ಪಿದ್ದಾರೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
15/08/2021 11:44 am