ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕಾ ಪ್ರದೇಶದಲ್ಲಿರುವ ಹೋಟೆಲ್ವೊಂದರಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ದ್ವಾರಕಾದ ಓಯೋ ಕೃಷ್ಣ ಹೋಟೆಲ್ನಲ್ಲಿ ಇಂದು ಬೆಳಗ್ಗೆ 7:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ ಎಂಟು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುತ್ತಿದ್ದಾರೆ. ಹೋಟೆಲ್ ಕಟ್ಟಡದ ಒಳಗಡೆ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲೂ ತೊಡಗಿದ್ದಾರೆ.
PublicNext
15/08/2021 12:21 pm