ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನ ಹಂಪಿನಗರದಲ್ಲಿ ರಾತ್ರೋರಾತ್ರಿ ಸ್ಫೋಟ

ಬೆಂಗಳೂರು: ರಾಜ್ಯರಾಜಧಾನಿಯ ಹಂಪಿನಗರದಲ್ಲಿ ರಾತ್ರೋರಾತ್ರಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಹೊಮ್ಮಿದ ಭಾರಿ ಸದ್ದಿಗೆ ಜನ ಬೆಚ್ಚಿ ಬಿದ್ದಿದ್ದಾರೆ. ಎರಡಂತಸ್ತಿನ ಕಟ್ಟಡದ ಮೊದಲನೇ ಮಹಡಿ ಮನೆಯಲ್ಲಿ ಬ್ಲಾಸ್ಟ್ ಸಂಭವಿಸಿದೆ, ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಆದ್ರೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಮನೆಯ ಮುಂಭಾಗದಲ್ಲಿ ಇರಿಸಲಾಗಿದ್ದ ಫ್ರಿಡ್ಜ್ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.

ಮಧ್ಯರಾತ್ರಿ 12:45 ಸುಮಾರಿಗೆ ಸ್ಫೋಟ ಸಂಭವಿಸಿದೆ. ಆರಂಭದಲ್ಲಿ ಗ್ಯಾಸ್ ಸಿಲಿಂಡರ್ ನಿಂದ ಸ್ಫೋಟ ಸಂಭವಿಸರಬಹುದು ಎಂಬ ಶಂಕೆ ಮೂಡಿತ್ತು. ಆದರೆ ಗ್ಯಾಸ್ ಸಿಲಿಂಡರ್ ನಿಂದ ಸ್ಫೋಟ ಸಂಭವಿಸಿಲ್ಲ. ಸ್ಫೋಟಕ್ಕೆ ನೈಜ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

Edited By : Nagaraj Tulugeri
PublicNext

PublicNext

16/08/2021 10:40 am

Cinque Terre

88.51 K

Cinque Terre

1