ಆಗ್ರಾ : 17 ವರ್ಷದ ಕಾಮುಕನೋರ್ವ ಮೂರು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಇಟಾ ಜಿಲ್ಲೆಯ ಬಾಗ್ವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ಇಲ್ಲದ ಸಮಯದಲ್ಲಿ ಪಾಪಿ ಈ ಕೃತ್ಯ ಎಸಗಿದ್ದಾನೆ. ನಂತರ ತಾಯಿ ಮಗು ಅಳುತ್ತಿರುವುದನ್ನು ಕಂಡು ಸಮಾಧಾನ ಮಾಡಿದ್ದಾಳೆ. ಈ ವೇಳೆ ಮಗುವಿನ ಖಾಸಗಿ ಭಾಗದಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸೆಕ್ಷನ್ 376 ಮತ್ತು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ, ಕಾಮುಕನ ಬಂಧನಕ್ಕೆ ಬಲೆ ಬೀಸಿದ್ದಾರೆ.
PublicNext
16/08/2021 05:01 pm