ಚಿತ್ರದುರ್ಗ: ಬಟ್ಟೆ ಅಂಗಡಿ ಮಾಲೀಕನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಇಂದು ರಾತ್ರಿ ನಡೆದಿದೆ.
ಹೊಳಲ್ಕೆರೆ ಪಟ್ಟಣದ ಹೊಸದುರ್ಗ ರಸ್ತೆಯಲ್ಲಿರುವ ಪ್ರಿಯದರ್ಶಿನಿ ಬಟ್ಟೆ ಅಂಗಡಿ ಮಾಲೀಕನ ಮೇಲೆ ಈ ದಾಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಬಟ್ಟೆ ಅಂಗಡಿ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಳಲ್ಕೆರೆ ಪಟ್ಟಣ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
PublicNext
17/08/2021 10:32 pm