ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುದ್ಧಿ ಹೇಳಿದ್ದಕ್ಕೆ ಮಗ ನೇಣಿಗೆ ಶರಣು, ಅಪಘಾತಕ್ಕೆ ತಾಯಿ ಬಲಿ

ಬೆಂಗಳೂರು: ಬುದ್ಧಿ ಹೇಳಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಶಾಕ್‌ಗೆ ಒಳಗಾಗಿ ರಸ್ತೆಗೆ ಬಂದ ತಾಯಿಯೂ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ವಿಜಯನಗರ ಸಮೀಪದ ಮಾರೇನಹಳ್ಳಿಯಲ್ಲಿ ನಡೆದಿದೆ.

ಮಾರೇನಹಳ್ಳಿ ನಿವಾಸಿ ಲೀಲಾವತಿ ಹಾಗೂ ಮೋಹನ್ ದುರಂತ ಅಂತ್ಯ ಕಂಡ ತಾಯಿ- ಮಗ. ಲೀಲಾವತಿ ಅವರ ಪತಿ ನ್ಯಾಯಬೆಲೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ದಂಪತಿ ಇಬ್ಬರು ಗಂಡು ಮಕ್ಕಳೊಂದಿಗೆ ಸಂತೋಷದಿಂದ ಜೀವನ ಸಾಗಿಸುತ್ತಿದ್ದರು. ಈ ನಡುವೆ ಕಾಲೇಜಿಗೆ ಹೋಗಿದ್ದ ಮಗ ಮೋಹನ್ ಗೌಡ ಸ್ನೇಹಿತರೊಂದಿಗೆ ಬೈಕ್ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದ.

ಪೊಲೀಸರು ಬುದ್ಧಿ ಮಾತು ಹೇಳಿ ಮನೆಗೆ ಕಳಿಸಿದ್ದರು. ಇದರಿಂದ ಮನನೊಂದ ಮೋಹನ್ ನೇಣಿಗೆ ಶರಣಾಗಿದ್ದಾನೆ. ಇದನ್ನು ಗಮನಿಸಿದ ಮನೆಯವರು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದ್ರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮಗನ ಸಾವಿನಿಂದ ಆಘಾತಕ್ಕೆ ಒಳಗಾದ ಲೀಲಾವತಿ ಕಣ್ಣೀರಿಡುತ್ತಾ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಈ ವೇಳೆ ವೇಗವಾಗಿ ಬಂದ ಕಾರೊಂದು ಲೀಲಾವತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಗಂಭೀರವಾದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಅಪಘಾತ ಎನ್ನುವುದಾದರೂ ಸ್ಥಳದಲ್ಲಿ ಸಿಕ್ಕ ಸಿಸಿಟಿವಿ ದೃಶ್ಯದಲ್ಲಿ ಲೀಲಾವತಿಯೇ ಕಾರಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.

Edited By : Vijay Kumar
PublicNext

PublicNext

18/08/2021 08:42 pm

Cinque Terre

40.48 K

Cinque Terre

0

ಸಂಬಂಧಿತ ಸುದ್ದಿ