ಬೆಂಗಳೂರು: ಇಬ್ಬರು ಸ್ನೇಹಿತರು ರಾತ್ರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ಕೆಲಹೊತ್ತಿನಲ್ಲೇ ತಾರಕ್ಕೇರಿದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಪ್ರಶಾಂತ್ ತನ್ನ ಸ್ನೇಹಿತ ನಿತೇಶ್ ನನ್ನು ಕೊಲೆ ಮಾಡಿದ್ದಾನೆ. ರಾತ್ರಿ ಇಬ್ಬರೂ ಒಟ್ಟಿಗೆ ಪಾರ್ಟಿ ಮಾಡಿದ್ದು, ಪಾರ್ಟಿ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದೆ. ಈ ವೇಳೆ ನಿತೇಶ್ ಸ್ನೇಹಿತ ಪ್ರಶಾಂತ್ ಗೆ ಒದ್ದಿದ್ದ ಎನ್ನಲಾಗಿದೆ. ಕಾಲಿನಿಂದ ಒದ್ದ ಬಳಿಕ ಇಬ್ಬರು ಒಟ್ಟಿಗೆ ಮಲಗಿದ್ದರು. ಮಲಗಿ ಸ್ವಲ್ಪ ಸಮಯದ ನಂತರ ಕೋಪಗೊಂಡು ಮತ್ತೆ ಎಚ್ಚರಗೊಂಡಿದ್ದ ಪ್ರಶಾಂತ್, ನನಗೇ ಒದೆಯುತ್ತೀಯಾ ಎಂದು ಹಾಲೊ ಬ್ರಕ್ಸ್ ಎತ್ತಿ ನಿತೇಶ್ ತಲೆಮೇಲೆ ಹಾಕಿದ್ದಾನೆ. ಪರಿಣಾಮ ನಿತೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಡಿಜೆ ಹಳ್ಳಿ ಪೊಲೀಸರು ಆರೋಪಿ ಪ್ರಶಾಂತ್ ಈಗ ಪೊಲೀಸರ ವಶದಲ್ಲಿದ್ದಾನೆ. ತನಿಖೆ ನಡೆಯುತ್ತಿದೆ.
PublicNext
20/08/2021 01:39 pm