ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಪ್ಪಿದ ಭಾರಿ ಅನಾಹುತ.! ವಿಷ ಆಹಾರ ಸೇವಿಸಿದ 100ಕ್ಕೂ ಅಧಿಕ ಜನ ಅಸ್ವಸ್ಥ

ದಾವಣಗೆರೆ: ಸೀಮಂತ ಕಾರ್ಯಕ್ರಮವೊಂದರಲ್ಲಿ ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ದುರ್ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಣ್ಣೆಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸೀಮಂತ ಕಾರ್ಯ ನಡೆದಿತ್ತು. ಈ ವೇಳೆ ನೂರಾರು ಜನರಿಗೆ ಸಿಹಿಯೂಟ ಹಾಕಲಾಗಿತ್ತು. ಊಟ ಸೇವಿಸಿದ 100ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಕೆಲವರನ್ನು ಬೆಣ್ಣೆಹಳ್ಳಿ ಪಿಎಚ್‌ಸಿ‌ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಅಸ್ವಸ್ಥರೆಲ್ಲರನ್ನೂ ಹಲವರು ಗುಣಮುಖರಾಗಿ ಈಗಾಗಲೇ ಮನೆಗೆ ಹೋಗಿದ್ದಾರೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇನ್ನೂ 20ಕ್ಕೂ ಹೆಚ್ಚು ಮಂದಿಯನ್ನ ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Edited By : Vijay Kumar
PublicNext

PublicNext

25/08/2021 07:28 am

Cinque Terre

36.78 K

Cinque Terre

1

ಸಂಬಂಧಿತ ಸುದ್ದಿ