ಕೊಪ್ಪಳ: ಸರ್ಕಾರಿ ಶಾಲೆ ಆವರಣದಲ್ಲಿ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಹಗೇದಾಳ ಗ್ರಾಮದಲ್ಲಿ ಘಟನೆ ನಡೆದಿದೆ.
ರಮೇಶ್ ಯಂಕಪ್ಪ ಮೃತ ಯುವಕ. ಯಾರೋ ಕೊಲೆ ಮಾಡಿ ಮೃತದೇಹವನ್ನು ನೇಣಿಗೆ ಹಾಕಿದ್ದಾರೆ ಎಂದು ರಮೇಶ್ ಕುಟುಂಬಸ್ಥರು ಆರೋಪಿಸಿದ್ದಾರೆ. ಚಳ್ಳೂರು-ಹಗೇದಾಳ ಗ್ರಾಮದ ಪ್ರೌಢ ಶಾಲೆಯಲ್ಲಿ ಯುವಕನ ಶವ ಪತ್ತೆಯಾಗಿದೆ.
ವಿದ್ಯುತ್ ವೈರ್ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ 112 ವಾಹನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
PublicNext
25/08/2021 01:22 pm