ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ. ಸ್ನೇಹಿತನ ಜೊತೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.
PublicNext
25/08/2021 02:21 pm