ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಮೂವರು ಶಂಕಿತರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಕಾಮುಕರು ಅತ್ಯಾಚಾರಕ್ಕೂ ಮುನ್ನ ಮದ್ಯ ಸೇವನೆ ಮಾಡಿದ್ದರು. ಹೀಗಾಗಿ ಪೊಲೀಸರು ವೈನ್ ಶಾಪ್ಗಳ ಜಾಡುಹಿಡಿದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆಲನಹಳ್ಳಿಯ ವೈನ್ಸ್ ಶಾಪ್ನಲ್ಲಿ ಮದ್ಯ ಖರೀದಿಸಿದ್ದ ದೃಶ್ಯದ ಆಧಾರದ ಮೇಲೆ ಪೊಲೀಸರು ಸದ್ಯ ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಹತ್ತಕ್ಕೂ ಹೆಚ್ಚು ತನಿಖಾ ತಂಡಗಳನ್ನ ರಚಿಸಿದ್ದಾರೆ ಎನ್ನಲಾಗಿದೆ.
PublicNext
26/08/2021 09:45 am