ಚಿಕ್ಕಮಗಳೂರು: 'ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದೇವೆ' ಎಂದು ವಾಯ್ಸ್ ಮೆಸೇಜ್ ಕಳುಹಿಸಿ ಒಂದೇ ಕುಟುಂಬದ ನಾಲ್ವರು ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಳೇಜೇಡಿಕಟ್ಟೆ ಗ್ರಾಮದ ಮಂಜು, ಪತ್ನಿ ನೀತು, ಮಗ ಧ್ಯಾನ್ ಹಾಗೂ ಮಂಜು ತಾಯಿ ಸುನಂದಮ್ಮ ಆತ್ಮಹತ್ಯೆಗೆ ಯತ್ನಿಸಿದವರ ಎಂದು ಗುರುತಿಸಲಾಗಿದೆ. ಮೂಲತಃ ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆ ಮೂಲದ ನೀತು ಎಂಬವರನ್ನು ಬೆಂಗಳೂರಿಗೆ ಮದುವೆ ಮಾಡಿಕೊಟ್ಟಿದ್ದರು. ದಂಪತಿಗೆ 13 ವರ್ಷ ಪ್ರಾಯದ ಧ್ಯಾನ್ ಎಂಬ ಮಗನಿದ್ದಾರೆ. ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಮಂಜು, ನೀತು, ಧ್ಯಾನ್ ಹಾಗೂ ಮಂಜು ತಾಯಿ ಸುನಂದಮ್ಮ ನಾಲ್ವರು ಸ್ವಿಫ್ಟ್ ಕಾರಿನಲ್ಲಿ ಬಂದು ಮಳಲಿ ಚನ್ನೇನಹಳ್ಳಿ ಬಳಿ ಭದ್ರಾ ನಾಲೆಗೆ ಕಾರಿನ ಸಮೇತ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಈ ಪೈಕಿ ಕುಟುಂಬದ 13 ವರ್ಷ ಧ್ಯಾನ್, 35 ವರ್ಷದ ನೀತು ಸಾವಿನಿಂದ ಪಾರಾಗಿದ್ದಾರೆ. ನೀತು ಪತಿ ಮಂಜು ಹಾಗೂ ಅತ್ತೆ ಸುನಂದಮ್ಮ ಸಾವಿನ ಶಂಕೆ ವ್ಯಕ್ತವಾಗಿದ್ದು, ನೀರಲ್ಲಿ ಮುಳುಗಿರುವ ಇಬ್ಬರ ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದೆ. ರೀಕೆರೆ ತಾಲೂಜಿನ ಎಂ.ಸಿ ಹಳ್ಳಿ ಬಳಿ ನಾಲೆಗೆ ಬಿದ್ದು ಇಡೀ ಕುಟುಂಬ ಆತ್ಮಹತ್ಯೆ ಯತ್ನಿಸಿದೆ. ಸದ್ಯ ಸ್ಥಳಕ್ಕೆ ಎಸ್ಪಿ ಅಕ್ಷಯ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
26/08/2021 12:58 pm