ಚಿತ್ರದುರ್ಗ : ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿ ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಬಿಜಿ. ಕೆರೆ ಗ್ರಾಮದ ಬಿ.ಎಸ್.ಎನ್.ಎಲ್. ಟವರ್ ಹತ್ತಿರದ ಹಳ್ಳದಲ್ಲಿ 12 ಜನರ ತಂಡವೊಂದು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಮೊಳಕಾಲ್ಮೂರು ವೃತ್ತ ನಿರೀಕ್ಷಕರಾದ ಉಮೇಶ್ ಹಾಗೂ ಪಿಎಸ್ಐ ಬಸವರಾಜ್ ಅವರ ತಂಡ ದಾಳಿ ನಡೆಸಿ 12 ಜನರನ್ನು ಬಂಧಿಸಿ ಅವರಿಂದ 4,07,778 ರೂಪಾಯಿ ನಗದು ಹಣ, 15 ಮೋಟರ್ ಸೈಕಲ್ ಗಳು, 10 ಮೊಬೈಲ್ ಫೋನ್ ಗಳು ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದರಿ ಕಾರ್ಯವನ್ನು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ. ಚಿತ್ರದುರ್ಗದಲ್ಲಿ ಇಸ್ಪೀಟ್ ದಂಧೆ ಬಗ್ಗೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ವೈರಲ್ ಆಗಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸ್ ಇಸ್ಪೀಟ್ ದಂಧೆಕೋರರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
PublicNext
26/08/2021 10:26 pm