ಕಾರವಾರ: ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದೆ. ಮೈಸೂರಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ತನಿಕೆ ನಡೆಯುತ್ತಿರುವಾಗಲೇ ಉತ್ತರ ಕನ್ನಡದ ಜಿಲ್ಲೆಯಲ್ಲಿ 11 ವರ್ಷದ ಅಪ್ರಾಪ್ತೆ ಮೇಲೆ ಸೋದರ ಮಾವನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಸಿದ್ದಾಪುರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಹೊರಟಾಗ ಮನೆಗೆ ಬಿಡುವುದಾಗಿ ಹೇಳಿ ಬೈಕ್ ನಲ್ಲಿ ಕುರಿಸಿಕೊಂಡ ಆರೋಪಿ, ಮಾರ್ಗ ಮಧ್ಯೆ ಕಾಡಿನಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ನಂತರ ಯಾರಿಗೂ ಹೇಳದಂತೆ ಹೆದರಿಸಿ ಆಕೆಯನ್ನು ಮನೆಗೆ ಬಿಟ್ಟು ಹೋಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಸಿದ್ದಾಪುರ ಠಾಣೆಗೆ ದೂರು ನೀಡಿದ್ದು, ತಕ್ಷಣವೇ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ.
PublicNext
27/08/2021 10:33 am