ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಆಗಸ್ಟ್ 23ರಂದು ನಡೆದಿದ್ದ ದರೋಡೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆಯ ವಿಮಾನ ನಿಲ್ದಾಣದಲ್ಲಿ ಆರೋಪಿಗಳ ಬಂಧನವಾಗಿದೆ. ಇವರಲ್ಲದೆ ಓರ್ವ ಸ್ಥಳೀಯನನ್ನೂ ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೈಸೂರಿನ ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್‍ಗೆ ಆಗಸ್ಟ್ 23ರಂದು ಆರೋಪಿಗಳು ಚಿನ್ನಾಭರಣ ಅಂಗಡಿ ಒಳಗೆ ನುಗ್ಗಿದ್ದರು. ಅಲ್ಲಿ ಮಾಲೀಕನಿಗೆ ಥಳಿಸಿ ಚಿನ್ನಾಭರಣ ದರೋಡೆ ಮಾಡಲಾಗಿತ್ತು. ಅಲ್ಲದೆ ಚಿನ್ನದ ಅಂಗಡಿಗೆ ಬಂದಿದ್ದ ಚಂದ್ರು ಎಂಬ ಗ್ರಾಹಕನಿಗೆ ಗುಂಡು ಹಾರಿಸಲಾಗಿತ್ತು. ಪರಿಣಾಮ ದಡದಹಳ್ಳಿ ಗ್ರಾಮದ ಚಂದ್ರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ದರೋಡೆಕೋರರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
PublicNext
27/08/2021 12:48 pm