ಹಾಸನ: ಹಣಕಾಸಿನ ವಿಷಯಕ್ಕೆ ಸಂಬಂಧಪಟ್ಟಂತೆ ಎರಡು ಗುಂಪಿನ ನಡುವೆ ಬಡಿದಾಟವಾಗಿರೋ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳೆಗದ್ದೆಯ ಗುರುದೇವ್ ಪೇಟ್ರೊಲ್ ಬಂಕ್‌ನಲ್ಲಿ ನಡೆದಿದೆ.
ಬೇಲೂರು ಪಟ್ಟಣದ ಧೀರೇಶ್ ಹಾಗೂ ಬಾಳೆಗದ್ದೆಯ ಯುವಕ ಕವನ್ ನಡುವೆ ಹಣಕಾಸು ವ್ಯವಹಾರವಿತ್ತು. ಈ ವಿಚಾರವಾಗಿ ಕುಡಿದ ಮತ್ತಿನಲ್ಲಿ ಯುವಕರು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹೀಗಾಗಿ ಗಲಾಟೆಯಲ್ಲಿ ಕವನ್ಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎರಡು ದಿನದ ಹಿಂದೆ ನಡೆದಿರುವ ಗಲಾಟೆ ಇದಾಗಿದ್ದು, ಹೊಡೆದಾಟದ ದೃಶ್ಯಗಳು ಬಂಕ್‌ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.
PublicNext
27/08/2021 02:31 pm