ಬೆಳಗಾವಿ: ಮೈಸೂರಿನ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯದ ಜನರನ್ನು ಅಸುರಕ್ಷತೆಗೆ ದೂಡಿದೆ. ಈ ಘಟನೆ ಮರೆಯುವ ಮುನ್ನವೇ ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ವರದಿಯಾಗಿದೆ.
ಗೋಕಾಕ್ ತಾಲೂಕಿನ ಘಟಪ್ರಭಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 16 ವರ್ಷದ ಬಾಲಕಿ ಮೇಲೆ ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಈ ಸಂಬಂಧ ಘಟಪ್ರಭಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
PublicNext
27/08/2021 02:38 pm