ಮೈಸೂರು: ವಿದ್ಯಾರ್ಥಿನಿಯೋರ್ವಳ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೃತ್ಯ ನಡೆದ ಸ್ಥಳದಲ್ಲಿ ಸಿಕ್ಕ ಬಸ್ ಟಿಕೆಟ್, ಬಿಯರ್ ಬಾಟಲ್ ಸಾಕ್ಷಿಗಳನ್ನಾಗಿಸಿ ತನಿಖೆ ಕೈಗೊಂಡ ಪೊಲೀಸರು ಸದ್ಯ ಐದು ಆರೋಪಿಗಳನ್ನು ಬಂಧಿಸಿದ್ದಾರೆ.
ಘಟನೆ ನಡೆಯುವ ಮೂರು ದಿನಗಳ ಮುಂಚೆ ಮತ್ತು ಒಂದು ದಿನದ ಹಿಂದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಘಟನಾ ಸ್ಥಳಕ್ಕೆ ಬಂದಿರುವುದನ್ನು ಕಾಮಕರು ಫಾಲೋ ಮಾಡಿದ್ದರು. ಘಟನೆ ನಡೆದ ದಿನದಿಂದ ಕಾಮುಕರು ಎಸ್ಕೇಪ್ ಆಗಿದ್ದರಿಂದಾಗಿ ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದವರಾಗಿದ್ದು, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಂಧಿತ ಐವರ ಮೇಲೆ ಹಳೆ ಕ್ರಿಮಿನಲ್ ಕೇಸ್ ಹಿನ್ನೆಲೆ ಪೊಲೀಸರು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸಿ ಸತ್ಯಮಂಗಲದಿಂದ ಮೈಸೂರಿಗೆ ಕರೆತರುತ್ತಿದ್ದಾರೆ.
PublicNext
28/08/2021 11:00 am