ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು ಗ್ಯಾಂಗ್ ರೇಪ್ ಕೇಸ್ : ಆಸ್ಪತ್ರೆಯಿಂದ ಸಂತ್ರಸ್ತೆ ಡಿಸ್ಚಾರ್ಜ್ : ನಾನು ದೂರು ಕೊಡಲ್ಲ, ನನ್ನನ್ನು ಬಿಟ್ಟುಬಿಡಿ…

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 5 ಜನ ಆರೋಪಿಗಳನ್ನು ಬಂದಿಸಲಾಗಿದೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತ ಯುವತಿ ಡಿಸ್ಚಾರ್ಜ್ ಆಗಿದ್ದಾಳೆ. ಆದ್ರೆ ಯುವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡುತ್ತಿಲ್ಲ. ನನ್ನನ್ನು ಬಿಟ್ಟುಬಿಡಿ, ನಾನು ದೂರು ಕೊಡಲ್ಲ, ಈ ವಿಚಾರವಾಗಿ ನನ್ನನ್ನು ಪ್ರಶ್ನಿಸಬೇಡಿ ಎನ್ನುತ್ತಿದ್ದಾಳೆ.

ಯುವತಿಯ ಈ ನಡೆ ಪೊಲೀಸರಿಗೆ ತಲೆನೋವಾಗಿದೆ. ಅತ್ತ ಸತ್ಯಮಂಗಲದಲ್ಲಿ ಅರೆಸ್ಟ್ ಆದ ಆರೋಪಿಗಳನ್ನು ಪೊಲೀಸರು ಮೈಸೂರಿಗೆ ಕರೆತರುತ್ತಿದ್ದಾರೆ. ಇತ್ತ ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದು, ಪೊಲೀಸರ ಮುಂದೆ ಹೇಳಿಕೆ ಕೊಡಲು ನಿರಾಕರಿಸುತ್ತಿದ್ದಾರೆ.

ಸಂತ್ರಸ್ತೆ ಆಕೆಯ ತಂದೆ-ತಾಯಿಯಿಂದಲೂ ನಿರೀಕ್ಷಿತ ನೆರವು ಸಿಗದಿರುವ ಕಾರಣ ಇವರುಗಳ ಮನವೊಲಿಕೆಗೆ ಪ್ರಯತ್ನಿಸಿ ಹೈರಾಣಾಗಿರುವ ತನಿಖಾಧಿಕಾರಿಗಳು ಅನಿವಾರ್ಯವಾಗಿ ಸಂತ್ರಸ್ತೆಯ ಸ್ನೇಹಿತನಿಗೆ ದುಂಬಾಲು ಬಿದ್ದಿದ್ದಾರೆ. ಸಂತ್ರಸ್ತೆಯ ಸ್ನೇಹಿತನ ಹೇಳಿಕೆ ಆಧಾರಿಸಿ ಎಫ್ ಐಆರ್ ನಲ್ಲಿ ದಾಖಲಾಗಿದೆ.

Edited By : Nirmala Aralikatti
PublicNext

PublicNext

28/08/2021 11:52 am

Cinque Terre

69.52 K

Cinque Terre

8