ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು ಗ್ಯಾಂಗ್ ರೇಪ್ : ದರೋಡೆಗೆಂದು ಬಂದವರು ಅತ್ಯಾಚಾರ ಮಾಡಿದರು..

ಮೈಸೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿದ ಸತ್ಯಮಂಗಲದಲ್ಲಿ ಇಂದು ಬೆಳಗ್ಗೆ ಆರೋಪಿಗಳನ್ನು ಬಂಧಿಸಿ, ಇದೀಗ ಮೈಸೂರಿಗೆ ಕರೆತಂದಿದ್ದಾರೆ.

ಸದ್ಯ ಬಂಧಿತ ಆರೋಪಿಗಳಲ್ಲಿ ಮೂವರು ದರೋಡೆ ಮಾಡುವವರಾಗಿದ್ದಾರೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಗಳು ಇವರ ಮೇಲಿದೆ. ಮೊನ್ನೆಯೂ ಈ ಯುವತಿ ಮತ್ತು ಯುವಕನ ಬಳಿ ದರೋಡೆಗೆಂದು ಬಂದ ಈ ಪಾಪಿಗಳು ಇವರ ಬಳಿ ಏನು ಸಿಗದಿದ್ದಾಗ ಯುವತಿಯ ಮೇಲೆ ಎರಗಿ ಕಾಮತೃಷೆ ತೀರಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಖಾಸಗಿ ಮಾಧ್ಯಮವೊಂದಕ್ಕೆ ಲಭಿಸಿದೆ.

ಸದ್ಯ ಐವರು ಆರೋಪಿಗಳನ್ನ ಮೈಸೂರಿಗೆ ಕರೆತಂದಿರುವ ಪೊಲೀಸರು, ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಧೀಶರ ಎದುರು ಹಾಜರು ಪಡಿಸಲಿದ್ದಾರೆ. ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದವರಾಗಿದ್ದು, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು.

Edited By : Nirmala Aralikatti
PublicNext

PublicNext

28/08/2021 02:26 pm

Cinque Terre

110.39 K

Cinque Terre

12

ಸಂಬಂಧಿತ ಸುದ್ದಿ