ಮೈಸೂರು: ಚಾಮುಂಡಿ ಬೆಟ್ಟದ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಲು ಶ್ರಮಿಸಿದ ಪೊಲೀಸ್ ಸಿಬ್ಬಂದಿಗೆ 5 ಲಕ್ಷ ಬಹುಮಾನ ನೀಡುವುದಾಗಿ ಡಿಜಿಪಿ ಪ್ರವೀಣ್ ಸೂದ್ ಘೋಷಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಪಿಗಳನ್ನು ಬಂಧಿಸುವ ಮುನ್ನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಆಗ ಅವರು ಮೊದಲು ನಮ್ಮ ಪೊಲೀಸರ ತಂಡಕ್ಕೆ ಬಹುಮಾನ ಘೋಷಿಸಿ ಎಂದು ತಿಳಿಸಿದರು. ಅದರಂತೆ ಪೊಲೀಸರ ತಂಡಕ್ಕೆ 5 ಲಕ್ಷ ಬಹುಮಾನ ನೀಡುವುದಾಗಿ ಹೇಳಿದರು.
PublicNext
28/08/2021 06:40 pm