ಮೈಸೂರು: ಬಿರುಸಿನ ಕಾರ್ಯಾಚರಣೆ ನಡೆಸಿದ ಮೈಸೂರು ಪೊಲೀಸರು ಗ್ಯಾಂಗ್ ರೇಪ್ ಎಸಗಿದ ಕಾಮುಕರನ್ನು ಬಂಧಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಈ ತಂಡಕ್ಕೆ ಡಿಜಿಪಿ ಪ್ರವೀಣ್ ಸೂದ್ ಅವರು ಐದು ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.
ಅತ್ಯಾಚಾರ ಆರೋಪಿಗಳನ್ನು ಬಂಧಿಸಲು ತಂಡ ರಚಿಸಲಾಗಿತ್ತು. ಈ ತಂಡದಲ್ಲಿ ಎಸಿಪಿ ಶಿವಶಂಕರ್, ಪೊಲೀಸ್ ಇನ್‍ಸ್ಪೆಕ್ಟರ್ ಗಳಾದ ಶ್ರೀಕಾಂತ್, ಮಹಾದೇವಸ್ವಾಮಿ, ಪ್ರಕಾಶ್, ಅಜರುದ್ದೀನ್, ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಜಯಪ್ರಕಾಶ್, ಸಹಾಯಕ ಸಬ್ ಇನ್‍ಸ್ಪೆಕ್ಟರ್ ಗಳಾದ ಅನಿಲ್ ಮತ್ತು ಅಲೆಕ್ಸ್, ಹೆಡ್ ಕಾನ್‍ಸ್ಟೇಬಲ್ ರಮೇಶ್, ಕಾಂತರಾಜು ಭಗತ್, ಶರೀಫ್, ಮಹಾದೇವು, ರಾಜು ಹಾಗೂ ಪೊಲೀಸ್ ಕಾನ್‍ಸ್ಟೇಬಲ್ ಜೀವನ್, ಗಿರೀಶ್, ಸಾಗರ್ ಮತ್ತು ಸಿಬ್ಬಂದಿ ಮಂಜುನಾಥ್, ಕಿಶೋರ್ ಹಾಗೂ ಲತೀಫ್ ಆರೋಪಿಗಳನ್ನು ಪತ್ತೆ ಹಚ್ಚುವ ತಂಡದಲ್ಲಿದ್ದರು.
ನಿರಂತರ ಕಾರ್ಯಾಚರಣೆ ನಡೆಸಿದ ಈ ತಂಡದವರು 82 ಗಂಟೆಗಳಲ್ಲಿ ಐವರನ್ನು ಬಂಧಿಸಿದ್ದಾರೆ. ತಂಡದಲ್ಲಿ ಮೈಸೂರು ಗ್ರಾಮಾಂತರ ಹಾಗೂ ದಕ್ಷಿಣ ವಲಯ ಪೊಲೀಸರು ಇದ್ದರು.
PublicNext
28/08/2021 09:35 pm