ಭೋಪಾಲ್: ವ್ಯಕ್ತಿಯೋರ್ವ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯ ಗುಪ್ತಾಂಗವನ್ನೇ ಹೊಲಿದ ಅಮಾನವೀಯ, ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ರೈಲಾ ಗ್ರಾಮದಲ್ಲಿ ನಡೆದಿದೆ.
ಪತಿಯ ವಿಕೃತಿಯಿಂದ ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಂತ್ರಸ್ತೆ ನೀಡಿದ ದೂರು ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಸಂಬಂಧ ಮಾಹಿತಿ ನೀಡಿರುವ ಅಸಿಸ್ಟೆಂಟ್ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋನ್ಕಾರ್, "ದೂರು ದಾಖಲಾಗುತ್ತಿದ್ದಂತೆ ಆರೋಪಿ ಪತಿ ತಲೆ ಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಗಂಡನಿಂದ ಚಿತ್ರಹಿಂಸೆ ಅನುಭವಿಸಿದ್ದರೂ ಸಹ ಪತ್ನಿ ಆತನಿಗೆ ಕಠಿಣ ಕ್ರಮ ತೆಗೆದುಕೊಳ್ಳದಂತೆ ಮನವಿ ಮಾಡಿಕೊಂಡಿದ್ದಾಳೆ" ಎಂದು ತಿಳಿಸಿದ್ದಾರೆ.
PublicNext
29/08/2021 08:55 am