ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಪೊಲೀಸರು ವಿಕೃತಿ ಮೆರೆದ ಇಬ್ಬರು ಕಾಮುಕರನ್ನು ಬಂಧಿಸಿ, ಬಿಸಿ ಮುಟ್ಟಿಸಿದ್ದಾರೆ.
ಹೌದು. 10 ವರ್ಷದ ಬಾಲಕಿಗೆ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಕಳುಹಿಸಿದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಾಲಕಿಗೆ ಆಕೆಯ ಪೋಷಕರು ಆಕೆಗೆ ಸ್ಮಾರ್ಟ್‌ಫೋನ್ ಕೊಡಿಸಿದ್ದರು. ಆಕೆಯ ನಂಬರ್ ತೆಗೆದುಕೊಂಡಿದ್ದ ಆರೋಪಿಗಳು ಬಾಲಕಿಯ ನಗ್ನ ಫೋಟೋಗಳಿಗೆ ಬೇಡಿಕೆ ಇಟ್ಟಿದ್ದರು. ಅಷ್ಟೇ ಅಲ್ಲದೆ ಈ ವಿಚಾರವನ್ನು ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.
ಕಾಮುಕರ ಕಿರುಕುಳದಿಂದ ಬೇಸತ್ತ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ತಕ್ಷಣವೇ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
PublicNext
29/08/2021 11:28 am