ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡ್ರಗ್ಸ್ ಕೇಸ್: ಸೆಲೆಬ್ರಿಟಿ ಸೇರಿ ಉದ್ಯಮಿಗಳ ಮನೆ ಮೇಲೆ ಪೊಲೀಸ್ ದಾಳಿ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ಮನೆಗಳ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ. ಸೋನಿಯಾ ಅಗರವಾಲ್, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆನ್ನಲಾಗಿದೆ.

ಗೋವಿಂದಪುರ ಠಾಣೆ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ರಾಜಾಜಿನಗರ, ಪದ್ಮನಾಭನಗರ,

ಬೆನ್ಸನ್ ಟೌನ್ ಸೇರಿದಂತೆ ಹಲವೆಡೆ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಲಾಗಿದ್ದು, 15 ದಿನ ಹಿಂದೆ ಡ್ರಗ್ ಪೆಡ್ಲರ್ ಆರೋಪಿ ಥಾಮಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆರೋಪಿ ಥಾಮಸ್ ಜೊತೆ ಈ ವ್ಯಕ್ತಿಗಳು ನಿರಂತರ ಸಂಪರ್ಕದಲ್ಲಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪೂರ್ಣ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಡ್ರಗ್ಸ್ ಪತ್ತೆಯಾದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

Edited By : Nagaraj Tulugeri
PublicNext

PublicNext

30/08/2021 11:34 am

Cinque Terre

39 K

Cinque Terre

0

ಸಂಬಂಧಿತ ಸುದ್ದಿ