ಲಕ್ನೋ: ಅವಾಚ್ಯ ಪದಗಳಿಂದ ನಿಂದಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನೋರ್ವ ಮಹಿಳಾ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಈ ಘಟನೆ ಲಕ್ನೋದ ಅಲಿಗಂಜ್‌ನಲ್ಲಿ ಭಾನುವಾರ ನಡೆದಿದ್ದು, ಆರೋಪಿಯನ್ನು ಪ್ರಭಾತ್ ಕುಮಾರ್ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ಆರೋಪಿ ಪ್ರಭಾತ್ ಕುಮಾರ್ ಮಹಿಳಾ ಪೇದೆಯ ತಲೆಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳಾ ಪೇದೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
PublicNext
30/08/2021 06:43 pm