ಬೆಂಗಳೂರು: ಜಿಮ್ನಲ್ಲಿ ದೈಹಿಕ ಕಸರತ್ತು ನಡೆಸಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದ ಯುವಕನೋರ್ವನಿಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರ್ಕೌಟ್ ವೇಳೆ ಯುವಕನಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಬಳಿಕ ಪಕ್ಕದಲ್ಲೇ ಇದ್ದ ಮೆಟ್ಟಿಲ ಮೇಲೆ ಯುವಕ ಸ್ವಲ್ಪ ಹೊತ್ತು ಕುಳಿತಿದ್ದ. ನೀರು ಕುಡಿದ ಸ್ವಲ್ಪ ಹೊತ್ತಿನಲ್ಲೇ ಯುವಕ ಕುಸಿದು ಬಿದ್ದಿದ್ದಾನೆ.
ಈ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಇದು ಬೆಂಗಳೂರಿನ ಬನಶಂಕರಿಯ ಗೋಲ್ಡ್ ಜಿಮ್ನಲ್ಲಿ ನಡೆದಿದೆ ಎನ್ನಲಾಗಿದೆ. ಆಗಸ್ಟ್ 25ರಂದು ಈ ಘಟನೆ ನಡೆದಿದ್ದು, ಎಲ್ಲಿ ನಡೆದಿರುವುದು ಹಾಗೂ ಸಿಸಿಟಿವಿ ಕ್ಲಿಪ್ಪಿಂಗ್ನಲ್ಲಿ ಕಾಣಿಸಿಕೊಂಡಿರುವ ಯುವಕ ಯಾರು ಎಂಬ ಕುರಿತು ಖಚಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಈ ಬಗ್ಗೆ ಬನಶಂಕರಿ ಪೊಲೀಸರು ಪರಿಶೀಲನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
PublicNext
30/08/2021 09:10 pm