ಕೋಲಾರ: ಹಳ್ಳಿಯಲ್ಲಿ ಮನೆ ಮನೆಗೆ ತೆರಳಿ ವಿದ್ಯುತ್ ಬಿಲ್ ನೀಡುತ್ತಿದ್ದ ವೇಳೆ ಬಿಲ್ ಕಲೆಕ್ಟರ್ ಬಾಕಿ ಇರುವ ವಿದ್ಯುತ್ ಬಿಲ್ ಕೇಳಿದ ಕೇಳಿದ್ದಕ್ಕೆ ಅವರಿಗೆ ತಂದೆ ಮಗ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ವ್ಯಾಪ್ತಿಯ ಕೊತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹೊಡೆದಾಟದ ವೀಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಉತ್ತಣ್ಣ ಹಾಗೂ ಅವರ ಮಗ ಶ್ರೀನಾಥ್ ಬಿಲ್ ಕಲೆಕ್ಟರ್ ನಾಗೇಶ್ ಮೇಲೆ ಹಲ್ಲೆ ನಡಿಸಿದ್ದಾರೆ. ಉತ್ತಣ್ಣ 13,000 ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಇತ್ತೀಚೇಗೆ ಮುತ್ತಣ್ಣ ಮನೆಗೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿತ್ತು. ಇದನ್ನ ಪ್ರಶ್ನಿಸಿದ್ದಕ್ಕೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಘಟನೆ ಸಂಬಂಧ ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
PublicNext
31/08/2021 11:22 am