ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಡನ ಸಾಲಕ್ಕೆ ಹೆಂಡತಿಗೆ ಚಿತ್ರಹಿಂಸೆ ನೀಡಿದ ಖಾಸಗಿ ಫೈನಾನ್ಸ್.!

ಯಾದಗಿರಿ: ನಗರದಲ್ಲಿ ಬಡ್ಡಿ ವ್ಯವಹಾರ ಮೀತಿ ಮೀರಿದ್ದು, ಖಾಸಗಿ ಫೈನಾನ್ಸ್​ಗಳಿಂದ ಸಾಲಗಾರರಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಖಾಸಗಿ ಫೈನಾನ್ಸ್ ವೊಂದು ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿರಿಸಿದೆ. ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಶಿವಶಂಕರ್ ಫೈನಾನ್ಸ್ ನಿಂದ ಸಾಲಗಾರರ ಕುಟುಂಬಕ್ಕೆ ಕಿರುಕುಳ ನೀಡಲಾಗುತ್ತಿದೆ. ಶಿವಶಂಕರ್ ಫೈನಾನ್ಸ್‌ನಲ್ಲಿ ಮಹ್ಮದ್ ಮೂರು ಲಕ್ಷ ಸಾಲ ಪಡೆದಿದ್ದರು. ಸಮಯಕ್ಕೆ ಸರಿಯಾಗಿ ಅಸಲು ಮತ್ತು ಬಡ್ಡಿ ಕಟ್ಟಿದ್ದರು. ಹೀಗಿದ್ದರೂ ಫೈನಾನ್ಸ್‌ನಿಂದ ಹೆಚ್ಚಿನ ಬಡ್ಡಿ ನೀಡಲು ಒತ್ತಾಯ ಮಾಡಿತ್ತು. ಇದಕ್ಕೆ ಮಹ್ಮದ್ ಒಪ್ಪಿರಲಿಲ್ಲ.

ಹೀಗಾಗಿ ಆತನ ಹೆಂಡತಿ ರಿಜ್ವಾನರನ್ನು ಆಫೀಸ್​ಗೆ ಕರೆದುಕೊಂಡು ಹೋಗಿ ಒತ್ತೆಯಾಳಾಗಿಸಿಕೊಂಡ ಫೈನಾನ್ಸ್ ಮಾಲೀಕರು, ಮೂತ್ರ ವಿಸರ್ಜನೆಗೂ ಬಿಡದೇ ಚಿತ್ರ ಹಿಂಸೆ ನೀಡಿದ್ದಾರೆ. ಫೈನಾನ್ಸ್ ನಡೆಸುವ ಶಿವಶಂಕರ್, ಚಂದ್ರಕಲಾ, ಶಿವಮ್ಮ, ಪಾರ್ವತಿ ಎಂಬವರಿಂದ ಈ ಕೃತ್ಯ ನಡೆದಿದೆ ಎನ್ನಲಾಗ್ತಿದೆ. ಇನ್ನೂ ಫೈನಾನ್ಸ್‌ನವರ ಕಿರುಕುಳವನ್ನು ರಿಜ್ವಾನ್‍ರವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದ್ದಾರೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ

Edited By : Nirmala Aralikatti
PublicNext

PublicNext

31/08/2021 03:25 pm

Cinque Terre

41.34 K

Cinque Terre

3