ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಬಿಐ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಇದೇ ವರದಿ ಬಗ್ಗೆ ಎಡಿಜಿಪಿ ಭಾಸ್ಕರ್ ರಾವ್ ಅಸಮಧಾನಿತರಾಗಿದ್ದಾರೆ.
ವರದಿಯಲ್ಲಿ ಇನ್ನೂ ಇಬ್ಬರು ಪ್ರಮುಖ ಆರೋಪಿಗಳ ಹೆಸರು ಉಲ್ಲೇಖಿಸಿಲ್ಲ. ಇದು ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ಎಂದಿದ್ದಾರೆ. ಹಾಗೂ ಈ ಬಗ್ಗೆ ಮರು ತನಿಖೆ ಮಾಡುವಂತೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
PublicNext
31/08/2021 05:01 pm