ಯಾದಗಿರಿ: ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪೊಲೀಸ್ ಕಾನ್ಸ್ಟೇಬಲ್ನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಧರ್ಮದೇಟು ತಿಂದ ಪೊಲೀಸ್ ಪೇದೆಯನ್ನು ಗುರಪ್ಪ ಎಂದು ಗುರುತಿಸಲಾಗಿದೆ. ಗುರಪ್ಪ ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮಹಿಳೆ ಮನೆಗೆ ಬಂದಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಮಹಿಳೆಯ ಸಂಬಂಧಿಕರು ಗುರಪ್ಪನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಳಿಕ ಆತನ ಕೈಕಾಲು ಕಟ್ಟಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ಬಗ್ಗೆ ಸ್ಥಳೀಯರೊಬ್ಬರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪೇದೆ ಗುರಪ್ಪನನ್ನು ಮಹಿಳೆಯ ಕುಟುಂಬಸ್ಥರಿಂದ ಬಿಡಿಸಿದ್ದಾರೆ. ಗಾಯಗೊಂಡ ಕಾನ್ಸ್ಟೇಬಲ್ ಗುರಪ್ಪನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತ ಮಹಿಳೆಯು ಮಹಿಳಾ ಪೊಲೀಸ್ ಠಾಣೆಯಲ್ಲಿ ಗುರಪ್ಪ ವಿರುದ್ಧ ಮಹಿಳೆಯು ದೂರು ನೀಡಿದ್ದಾರೆ. ಮಹಿಳೆ ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿರುವ ಪೊಲೀಸರು, ಪೇದೆ ಗುರಪ್ಪನನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.
PublicNext
02/09/2021 04:30 pm