ಇಂಫಾಲ: ಮಣಿಪಾಲದ ಪೊಲೀಸ್ ಸಿಬ್ಬಂದಿಯೊಬ್ಬರ ಮನೆಯಲ್ಲಿ ಬರೋಬ್ಬರಿ 90 ಕೋಟಿ ರೂ. ಮೌಲ್ಯದ 400 ಕೆಜಿ ಡ್ರಗ್ಸ್ ಪತ್ತೆಯಾಗಿದೆ.
ಹೌದು. ಡ್ರಗ್ಸ್ ಕಳ್ಳಸಾಗಣೆ ಪ್ರಕರಣಗಳ ವಿರುದ್ಧ ದೇಶದೆಲ್ಲೆಡೆ ಪೊಲೀಸರು ಸಮರ ಸಾರಿದ್ದಾರೆ. ಹೆಡ್ ಕಾನ್ಸ್ಟೇಬಲ್ ಮನೆ ಮೇಲೆ ದಾಳಿ ನಡೆಸಿದಾಗ ಈ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಯಾಯ್ ರಿಕ್ಪೋಕ್ ತುಲಿಹಾಲ್ನ ಅವಂಗ್ ಲೆಕೈ ಪ್ರದೇಶದಲ್ಲಿರುವ ಪೊಲೀಸ್ ಮುಖ್ಯಪೇದೆಯು ತನ್ನ ಮನೆಯಲ್ಲೇ ಡ್ರಗ್ಸ್ ಕಾರ್ಖಾನೆ ನಡೆಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಬುಧವಾರ ದಾಳಿ ನಡೆಸಿದಾಗ ಇಷ್ಟೊಂದು 400 ಕೆಜಿಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡ್ರಗ್ಸ್ನ ಮೌಲ್ಯ ಸುಮಾರು 90 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಈ ಪ್ರಕರಣದಲ್ಲಿ ಹೆಡ್ಕಾನ್ಸ್ಟೇಬಲ್ ಸೇರಿ ಮೂವರನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
02/09/2021 08:45 pm