ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಚ್ಚಿನ ಬೆಲೆಗೆ ಯೂರಿಯಾ ಮಾರಾಟ: ಅಧಿಕಾರಿಗಳ ದಾಳಿ

ಹಾಸನ: ಯೂರಿಯಾ ಗೊಬ್ಬರ ಅಕ್ರಮ ದಾಸ್ತಾನು ಮಾಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿ ಗೊಬ್ಬರ ಮೂಟೆಗಳನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಅರಸೀಕೆರೆ ತಾಲೂಕಿನ ಅಣ್ಣಾಯಕನಹಳ್ಳಿ, ಕೆಳಗಲಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಜಯಶಂಕರ್ ಅವರ ಮನೆಯ ಮುಂಭಾಗ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ರೈತರಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ್, ರಸಗೊಬ್ಬರ ನಿರೀಕ್ಷಕ ಪ್ರಭಾವತಿ ಮತ್ತು ಪೊಲೀಸರ ತಂಡ ದಾಳಿ ನಡೆಸಿ, 47 ಕೆ.ಜಿ. ತೂಕದ 97 ಯೂರಿಯಾ ಗೊಬ್ಬರದ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಆರೋಪಿ ಜಯಶಂಕರ್‌ನನ್ನು ವಶಕ್ಕೆ ಪಡೆದಿದ್ದಾರೆ.

Edited By : Nagaraj Tulugeri
PublicNext

PublicNext

03/09/2021 12:44 pm

Cinque Terre

90.28 K

Cinque Terre

1

ಸಂಬಂಧಿತ ಸುದ್ದಿ