ಮೈಸೂರು : ಗ್ಯಾಂಗ್ ರೇಪ್ ಘಟನೆ ಮಾಸುವ ಮುನ್ನವೇ ಮೈಸೂರಿನಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದೆ. ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆ ಮಾಡಿದ ಘಟನೆ ಸ್ಟಡಿಹೌಸ್ ಬಳಿ ನಡೆದಿದೆ. ಹಲ್ಲೆಗೊಳಗಾದ ಯುವತಿಯನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟಡಿ ಹೌಸ್ ಒಳಗೆ ಪ್ರವೇಶಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆಗೈದು ಪರಾರಿಯಾಗಿದ್ದಾರೆ ಎಂದು ಎನ್ನಲಾಗಿದೆ.
ಸ್ಟಡಿ ಹೌಸ್ ನಲ್ಲಿ ಆಂಧ್ರಪ್ರದೇಶದ 7 ಮಂದಿ ವಿದ್ಯಾರ್ಥಿನಿಯರು ಇದ್ದರು. ಇನ್ನು ಈ ಘಟನೆ ನಡೆದ ಸಂದರ್ಭದಲ್ಲಿ ಓರ್ವ ವಿದ್ಯಾರ್ಥಿನಿ ಹೊರತುಪಡಿಸಿ ಉಳಿದವರು ತರಗತಿಗೆ ಹೋಗಿದ್ದರು. ಈ ವೇಳೆ ವಿದ್ಯಾರ್ಥಿನಿ ಒಬ್ಬಳೇ ಇರುವುದನ್ನು ಗಮನಿಸಿದ ನೀಚರು ಅತ್ಯಾಚಾರಕ್ಕೆ ಯತ್ನಿಸಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಷಯ ತಿಳಿದು ಸ್ಥಳಕ್ಕೆ ನರಸಿಂಹರಾಜ ಠಾಣೆಯ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ತನಿಖೆ ನಡೆಸಿದ್ದಾರೆ.
PublicNext
03/09/2021 07:28 pm