ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮದ್ಯ ಕುಡಿಸಿ ಮಹಿಳಾ ಟೆಕ್ಕಿ ಮೇಲೆ ಅತ್ಯಾಚಾರ: ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ವಿದೇಶಿಗರ ಆಟಾಟೋಪ ಮಿತಿಮೀರಿದೆ. ಅಪರಾಧಗಳ ಮೇಲೆ ಅಪರಾಧಗಳನ್ನು ಮಾಡುತ್ತಿದ್ದಾರೆ. ಸದ್ಯ ಇಬ್ಬರು ನೈಜೀರಿಯಾ ಪ್ರಜೆಗಳು ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಇಬ್ಬರು ನೈಜೀರಿಯಾ ಪ್ರಜೆಗಳನ್ನ ಪೊಲೀಸರು ಬಂಧಿಸಿದ್ದಾರೆ.

ಬಾಣಸವಾಡಿ ಪೊಲೀಸರು ಇಬ್ಬರು ಅತ್ಯಾಚಾರ ಆರೋಪಿಗಳಾದ ಆಯಂಟೋನಿ (35) ಮತ್ತು ಒಬಾಕಾನನ್ನು (36) ಬಂಧಿಸಿದ್ದಾರೆ. ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟವೇರ್ ಉದ್ಯೋಗಿಯಾಗಿರುವ 29 ವರ್ಷದ ಸಂತ್ರಸ್ತ ಯುವತಿಗೆ ಆರೋಪಿ ಆಯಂಟೋನಿ ಹಲವು ವರ್ಷಗಳಿಂದ ಪರಿಚಯವಿದ್ದ.

ಯುವತಿಗೆ ಪರಿಚಯವಿದ್ದ ಆರೋಪಿ ಆಯಂಟೋನಿ ಆಗಸ್ಟ್ 29ರಂದು ಯುವತಿಯನ್ನು ಸ್ನೇಹಿತರ ಮನೆಗೆಂದು ಕರೆದೊಯ್ದಿದ್ದ. ಬಳಿಕ ಮೂವರೂ ಜೊತೆಗೆ ಕುಳಿತು ಮದ್ಯ ಸೇವಿಸಿದ್ದರು. ಕುಡಿದ ಮತ್ತಿನಲ್ಲಿದ್ದಾಗ ಅತ್ಯಾಚಾರ ಮಾಡಿದ್ದಾಗಿ ಯುವತಿ ಆರೋಪ ಮಾಡಿದ್ದಾಳೆ.

ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಇಬ್ಬರನ್ನೂ ಬಂಧಿಸಲಾಗಿದೆ. ಯುವತಿಯನ್ನು ಬಾಣಸವಾಡಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

Edited By : Nirmala Aralikatti
PublicNext

PublicNext

04/09/2021 10:24 am

Cinque Terre

90.64 K

Cinque Terre

4