ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯುತ್ ಬಿಲ್ ನಲ್ಲಿ ಅಕ್ರಮ, ಮೂವರು ಬೆಸ್ಕಾಂ ಸಿಬ್ಬಂದಿ ಅಮಾನತು

ಬೆಂಗಳೂರು: ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬ ಮೂವರು ಬೆಸ್ಕಾಂ ಸಿಬ್ಬಂದಿ ಅಮಾನತು ಮಾಡಿಲಾಗಿದೆ ಎಂದು ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಈ ಮೂವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ ಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟ ಉಂಟಾಗಲು ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಕೂಡ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

04/09/2021 02:08 pm

Cinque Terre

79.39 K

Cinque Terre

3