ರಾಯಚೂರು: ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.
ಹನೀಫ್ (30) ಕೊಲೆಯಾದ ಯುವಕ. ಹಟ್ಟಿಚಿನ್ನದಗಣಿ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಆಟೋಮೊಬೈಲ್ ಅಂಗಡಿ ನಡೆಸುತ್ತಿದ್ದ ಹನೀಫ್ ಜೊತೆ ಕೆಲ ಮೆಕಾನಿಕ್‍ಗಳು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದರು. ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ.
ಘಟನಾ ಸ್ಥಳಕ್ಕೆ ಹಟ್ಟಿ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.
PublicNext
04/09/2021 06:34 pm