ಮೈಸೂರು: ಐದು ರೂಪಾಯಿ ನಾಣ್ಯ ನುಂಗಿದ್ದ ನಾಲ್ಕು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಜಿಲ್ಲೆ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಖುಷಿ(4) ಮೃತ ಬಾಲಕಿ. ಹಿರಿಕ್ಯಾತನಹಳ್ಳಿಯ ಅಜ್ಜಿಯ ಮನೆಯಲ್ಲಿ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ಆಕಸ್ಮಿಕವಾಗಿ ಆಕೆ ನಾಣ್ಯವನ್ನು ನುಂಗಿದ್ದಳು. ಈ ಬಗ್ಗೆ ತಿಳಿದ ಪೋಷಕರು ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಭಾನುವಾರ ಮೃತಪಟ್ಟಿದ್ದಿ, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
PublicNext
06/09/2021 11:45 am