ಭೋಪಾಲ್: 'ಲವ್ ಜಿಹಾದ್' ಆರೋಪದಲ್ಲಿ ಗುಂಪೊಂದು ಅಪ್ರಾಪ್ತ ಹಿಂದೂ ಬಾಲಕನ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ದೇವಾಸ್‌ನಲ್ಲಿ ನಡೆದಿದೆ.
16 ವರ್ಷ ಹಿಂದೂ ಬಾಲಕನನ್ನು ಮುಸ್ಲಿಂ ಎಂದು ಭಾವಿಸಿದ ಗುಂಪು ಅಮಾನುಷವಾಗಿ ಹಲ್ಲೆ ನಡೆಸಿದೆ. ಈ ಘಟನೆ ದೇವಾಸ್ ಜಿಲ್ಲಾ ಕೇಂದ್ರದಿಂದ ಸುಮಾರು 17 ಕಿ.ಮೀ ದೂರದಲ್ಲಿರುವ ಬೌಂರಸಾ ಟೋಲ್‌ನಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿದೆ.
ಅಪ್ರಾಪ್ತ ವಯಸ್ಸಿನ ಬಾಲಕ ತನ್ನ ಗೆಳತಿಯೊಂದಿಗೆ ಉತ್ತರ ಪ್ರದೇಶದಿಂದ ಹೊರಟಿದ್ದ. ಆದರೆ ಮಧ್ಯಪ್ರದೇಶದಲ್ಲಿ ದುಷ್ಕರ್ಮಿಗಳು ಲವ್ ಜಿಹಾದ್ ಆರೋಪ ಹೊರೆಸಿ ಬಾಲಕನ ಮೇಲೆ ಪೊಲೀಸರ ಸಮ್ಮುಖದಲ್ಲೇ ಕ್ರೂರವಾಗಿ ಥಳಿಸಿದ್ದಾರೆ. ಈ ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ಆದ ವಿಡಿಯೋ ಆಧಾರದ ಮೇಲೆ, ಬೌಂರಸಾ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ಸಹಿತ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ ಎಂದು ವರದಿಯಾಗಿದೆ.
PublicNext
07/09/2021 11:15 am