ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಬಾಲಕನ ಜೀವ ತೆಗೆದ ಜೋಕಾಲಿ.!

ಹಾಸನ: ಜೋಕಾಲಿ ಆಟವಾಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಮನೋಜ್ (8) ಮೃತ ಬಾಲಕ. ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೋಷಕರು ಕೃಷಿ ಕಾರ್ಯಕ್ಕೆಂದು ಬಾಲಕ ಮನೋಜ್‌ನನ್ನು ಮನೆಯಲ್ಲಿ ಬಿಟ್ಟು ತೆರಳಿದ್ದರು. ಈ ವೇಳೆ ಮನೆಯಲ್ಲಿ ಕಟ್ಟಿದ ಜೋಕಾಲಿಯಲ್ಲಿ ಮನೋಜ್ ಆಟವಾಡುವ ಸಂದರ್ಭದಲ್ಲಿ, ಕುತ್ತಿಗೆಗೆ ಹಗ್ಗ ಸಿಲುಕಿಕೊಂಡಿದ್ದು, ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಣವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Edited By : Vijay Kumar
PublicNext

PublicNext

07/09/2021 02:08 pm

Cinque Terre

45.47 K

Cinque Terre

0